
ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆಗೆ ಶರಣು

ಶಿವಮೊಗ್ಗ : ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ನಗರದ ಅಶ್ವತ್ಥ್ ನಗರದಲ್ಲಿ ನಡೆದಿದೆ.
ನಗರದ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಅವರ ಸೊಸೆಯಾಗಿದ್ದ ನವ್ಯಶ್ರೀ ಎಂಬ ಯುವತಿಗೆ ಕಳೆದ ಐದು ತಿಂಗಳ ಹಿಂದೆ ಮದುವೆಯಾಗಿತ್ತು.

ನಿನ್ನೆ ರಾತ್ರಿ ನವ್ಯಶ್ರೀ ತುಳಸಿ ಪೂಜೆ ಮಾಡಿ, ಅರಿಶಿನ, ಕುಂಕುಮ ಸ್ವೀಕರಿಸಿ ಬಂದಿದ್ದಳು. ಬಳಿಕ ಕಾರ್ ಶೆಡ್‍ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.