
BREAKING – ಶ್ರೀರಾಮಸೇನೆ ಮುಖಂಡನ ಮೇಲೆ ಗುಂಡಿನ ದಾಳಿ

ಬೆಳಗಾವಿ : ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶನಿವಾರ ಸಂಜೆ ತಾಲೂಕಿನ ಹಿಂಡಲಗಾ ಬಳಿ ವಾಹನದಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಹಿಂದೂ ಮುಖಂಡ ರವಿ ಕೋಕಿತ್ಕರ್ ಗದ್ದಕ್ಕೆ ಬುಲೆಟ್ ತಗುಲಿದ್ದು ರಕ್ತಸ್ರಾವ ಉಂಟಾಗಿದೆ. ಇನ್ನೂ ವಾಹನ ಚಲಾಯಿಸುತ್ತಿದ್ದ ಚಾಲಕನ ಕೈಗೆ ಗುಂಡು ತಗುಲಿದ ಪರಿಣಾಮ ಕೈಯಲ್ಲಿ ಬುಲೆಟ್ ಸಿಲುಕಿದೆ.

ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.