ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ
ಮೈಸೂರು : ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ವಿಧಿವಶರಾಗಿದ್ದಾರೆ.
ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಅನೇಕ ಬಾರಿಗೆ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದರು ಇವರ ಸಹೋದರರು ಮಾತ್ರ ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡು ಇದ್ದಿದ್ದು ಅತ್ಯಂತ ಅಪರೂಪದ ವ್ಯಕ್ತಿತ್ವ. ಈಗಿನ ಕಾಲದಲ್ಲಿ ಶಾಸಕನಾದರೆ ಬಂದು ಬಳಗಕ್ಕೆ ಆಸ್ತಿ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯನಂತವರ ಘಟನೆಗಳು ಅಪರೂಪ.