
ಸಿದ್ಧೇಶ್ವರ ಶ್ರೀಗಳ ಆರೋಗ್ಯ ಕ್ಷೇಮ : ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ಪ್ರವಚನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ನಡೆದಾಡುವ ದೇವರಾದ ಸಿದ್ಧೇಶ್ವರ ಶ್ರೀಗಳು ಕ್ಷೇಮವಾಗಿದ್ದು, ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಇಂದು ವಿಜಯಪುರ ಜ್ಞಾನಯೋಗಾಶ್ರಮದಿಂದ ಪ್ರಕಟಣೆ ಹೊರಡಿಸಲಾಗಿದೆ.

ಮಂಗಳವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ಆಶ್ರಮ. ಶ್ರೀಗಳು ಕಾಲು ಜಾರಿ ಬಿದ್ದಿದ್ದು ಅವರ ಬಲಗಾಲಿಗೆ ಸ್ವಲ್ಪ ಪೆಟ್ಟಾಗಿದೆ. ಸಧ್ಯ ಮಹಾರಾಷ್ಟ್ರದ ಕಣ್ಣೇರಿಯ ಸಿದ್ಧಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಭೇಗ ಶ್ರೀಗಳು ಗುಣಮುಖರಾಗಲಿದ್ದು ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಲಾಗಿದೆ.