ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು – ಮುಂದುವರಿದ ಚಿಕಿತ್ಸೆ
ವಿಜಯಪುರ : ನಡೆದಾಡುವ ದೇವರು ಎಂದೇ ಖ್ಯಾತರಾದ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಚಿಕಿತ್ಸೆ ಮುಂದುವರಿದೆ.
ಆಸ್ರಮದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಶ್ರೀಗಳಿಗೆ ಬಿಎಲ್ ಡಿ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಶ್ರೀಗಳು ಹೆಚ್ಚಿನ ಚಿಕಿತ್ಸೆಗೆ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ದೇಶಾದ್ಯಂತ ಲಕ್ಷಾಂತರ ಭಕ್ತರನ್ನು ಹೊಂದಿರುವ ಶ್ರೀಗಳ ಆರೋಗ್ಯ ಸುಧಾರಿಸುವಂತೆ ಪ್ರಾರ್ಥನೆ ಮುಂದುವರಿದಿದೆ.
ನಿನ್ನೆಯಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಶ್ರೀಗಳನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದರು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಶ್ರೀಗಳ ಆರೋಗ್ಯ ಕುರಿರು ವಿಚಾರಿಸಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯದ ಸಚಿವರು ಶಾಸಕರು ಸೇರಿದಂತೆ ಅಪಾರ ಭಕ್ತವೃಂದ ಭೇಡಿ ಮಾಡುತ್ತಿದ್ದಾರೆ.