
ಫಾಲ್ಸ್ ನಲ್ಲಿ ಬಿದ್ದ ಯುವಕ ನಾಪತ್ತೆ…!

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತದಲ್ಲಿ ಯುವಕನೊಬ್ಬ ಕಾಲುಜಾರಿ ಹಳ್ಳಕ್ಕೆ ಬಿದ್ದು ನಾಪತ್ತೆಯಾಗಿದ್ದಾನೆ. ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಪವನ್ ಗಣಪತಿ ಜೋಗಿ (24) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ.
ಸ್ನೇಹಿತ ವಾಸುದೇವ್ ಜೊತೆ ಪವನ್ ಫಾಲ್ಸ್ ನೋಡಲು ಭಾನುವಾರ ಸಂಜೆ ತೆರಳಿದ್ದ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.