Select Page

ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಭೀಕರ ಅಪಘಾತ ; ತಪ್ಪಿದ ಅನಾಹುತ

ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಭೀಕರ ಅಪಘಾತ ; ತಪ್ಪಿದ ಅನಾಹುತ

ಪಶ್ಚಿಮ ಬಂಗಾಳ : ಭಾರತದ ಖ್ಯಾತ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಅವರಿದ್ದ ಕಾರಿಗೆ ಬೆಂಗಾವಲು ವಾಹನ ಡಿಕ್ಕಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಇವರು ಪಾರಾಗಿದ್ದಾರೆ.

ಶುಕ್ರವಾರ ಪಶ್ಚಿಮ ಬಂಗಾಳದ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಕಾರಿಗೆ ಲಾರಿ ಡಿಕ್ಕಿಯಾಗಿದ್ದು ತಕ್ಷಣ ಚಾಲಕ ಬ್ರೇಕ್ ಹಾಕಿದ್ದರ ಪರಿಣಾಮ ಹಿಂದಿನಿಂದ ಬೆಂಗಾವಲು ವಾಹನ ಡಿಕ್ಕಿಯಾಗಿದೆ.

ಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಆದಾಗ್ಯೂ, ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡವು. ಅಪಘಾತದ ನಂತರ, ಸೌರವ್ ಗಂಗೂಲಿ ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲೇ ಇದ್ದರು.

ನಂತರ ಅವರು ಬರ್ಧಮಾನ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು. ಈ ಅಪಘಾತದಲ್ಲಿ ಸೌರವ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರಿಂದ, ದೊಡ್ಡ ಅನಾಹುತವೊಂದು ತಪ್ಪಿದೆ.

Advertisement

Leave a reply

Your email address will not be published. Required fields are marked *

error: Content is protected !!