Select Page

ಇಂದು 10.30 ಕ್ಕೆ SSLC ಪರೀಕ್ಷಾ ಫಲಿತಾಂಶ ; ನಿಮ್ಮ ರಿಸಲ್ಟ್ ನೋಡುವುದು ಹೀಗೆ…!

ಇಂದು 10.30 ಕ್ಕೆ SSLC ಪರೀಕ್ಷಾ ಫಲಿತಾಂಶ ; ನಿಮ್ಮ ರಿಸಲ್ಟ್ ನೋಡುವುದು ಹೀಗೆ…!

ಬೆಂಗಳೂರು : SSLC ವಿದ್ಯಾರ್ಥಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದ ಪರೀಕ್ಷಾ ಫಲಿತಾಂಶ ಇಂದು ಗುರುವಾರ ಬೆಳಿಗ್ಗೆ 10.30 ಕ್ಕೆ ಪ್ರಕಟ ಆಗಲಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ.

2023 & 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ಇನ್ನೇನು‌ ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.

2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಸೇರಿದ್ದರು.

ನಿಮ್ಮ ಫಲಿತಾಂಶ ನೋಡಬೇಕಾದರೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

karresults.nic.in

kseab.karnataka.gov.in

ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ
kseab.karnataka.gov.in & karresults.nic.in
ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

Advertisement

Leave a reply

Your email address will not be published. Required fields are marked *