ಮೇ. 8 ರಂದು SSLC ಫಲಿತಾಂಶ ಪ್ರಕಟ ; ಪರಿಶೀಲಿಸುವುದು ಹೇಗೆ ಗೊತ್ತಾ?
ಬೆಂಗಳೂರು : ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ನೀಡಿದೆ.
ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.
2023 ರ SSLC – Result ನೋಡುವ ಕುರಿತು ತಮ್ಮ ಮಾಹಿಯಿ ಕೊಡಲಾಗುತ್ತದೆ. ಈ ಮಾಹಿತಿ ಆಧಾರಿಸಿ ತಾವು ತಮ್ಮ ಮನೆಯಲ್ಲಿ ಕುಳಿತುಕೊಂಡು ಫಲಿತಾಂಶ ನೋಡಬಹುದಾಗಿದೆ.
ಫಲಿತಾಂಶ ನೋಡಲು ಈ ಕೆಳಗಿನ ಲಿಂಕ್ ಒತ್ತಿ
ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ರ ಮೌಲ್ಯ ಮಾಪನವು ಪೂರ್ಣಗೊಂಡಿದ್ದು ಅತಿ ಶೀಘ್ರದಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ವರದಿಯಾಗಿದೆ ಮತ್ತು ಈ ಪ್ರಕ್ರಿಯೆಗೆ ಮಂಡಳಿಯು ಉಪ ಮುಖ್ಯ ಮೌಲ್ಯಮಾಪಕರು ಮತ್ತು ಸಹ ಮೌಲ್ಯಮಾಪಕರನ್ನು ನೇಮಿಸಿದೆ. 2023 ಕರ್ನಾಟಕ SSLC ಬೋರ್ಡ್ ಪರೀಕ್ಷೆಯಲ್ಲಿ ಒಟ್ಟು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ನೋಡುವುದು ಹೇಗೆ…?
ಅಧಿಕೃತ ವೆಬ್‌ಸೈಟ್- karresults.nic.in ಗೆ ಹೋಗಿ
ಕಾಣಿಸಿಕೊಂಡ ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ
ಹೊಸ ಲಾಗಿನ್ ಪುಟ ತೆರೆಯುತ್ತದೆ.
ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ
ಭವಿಷ್ಯದ ಉಲ್ಲೇಖಗಳ ಪ್ರಿಂಟ್ ಔಟ್ ತೆಗೆದುಕೊಳ್ಳಿ