SSLC ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ
ಬೆಳಗಾವಿ : 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ
ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷಾ ಪತ್ರ ತೋರಿಸಿ ಸಂಚಾರ ಮಾಡಬಹುದೆಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ಈ ಕುರಿತು ಪ್ರಕಟನೆ ಹೊರಡಿಸಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ. ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ 28-03-2022 ರಿಂದ 11-04-2022 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.