VIDEO : ಮಂಗಳೂರು ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ಸ್ಪರ್ಧೆ – ವೀಡಿಯೋ ವೈರಲ್
ಮಂಗಳೂರು: ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಕಿಸ್ಸಿಂಗ್ ಪಂದ್ಯ ಆಯೋಜಿಸಿದ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಹುಚ್ಚಾಟದ ವಿಡಿಯೋ ವೈರಲ್ ಆಗಿದೆ. ಪಂದ್ಯದ ನಿಯಮದಂತೇ ಎಲ್ಲರ ಎದುರೇ ಚುಂಬನ ಮಾಡಬೇಕು. ಇದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.
ಮನೆಯೊಂದರಲ್ಲಿ ನಡೆದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಕಿಸ್ಸಿಂಗ್ ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ವಿಡಿಯೋದಲ್ಲಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಇರುವುದನ್ನ ಸಹ ಕಾಣಬಹುದಾಗಿದೆ. ಅಲ್ಲದೇ ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಪರಸ್ಪರ ಲಿಪ್ ಕಿಸ್ ಮಾಡುತ್ತಿದ್ದು, ಇತರ ವಿದ್ಯಾರ್ಥಿಗಳು ಅವರನ್ನು ಹುರಿದುಂಬಿಸುತ್ತಿರುವುದು ಸಹ ರೆಕಾರ್ಡ್ ಆಗಿದೆ.