Select Page

Advertisement


ನಾಳೆ ಬೆಳಗಾವಿಗೆ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ; ಮನದ ಮಾತು ಕಾರ್ಯಕ್ರಮದಲ್ಲಿ ಭಾಗಿ

<br>ನಾಳೆ ಬೆಳಗಾವಿಗೆ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ; ಮನದ ಮಾತು ಕಾರ್ಯಕ್ರಮದಲ್ಲಿ ಭಾಗಿ

ಬೆಳಗಾವಿ : ಭಾರತದ ಅತಿದೊಡ್ಡ ಪುಸ್ತಕ ಭಂಡಾರ ಎನಿಸಿರುವ ಸಪ್ನ ಬುಕ್ ಹೌಸ್ ನಲ್ಲಿ ಖ್ಯಾತ ಲೇಖಕಿ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರೊಂದಿಗೆ ಮನದ ಮಾತು, ಮುಕ್ತ ಮಾತುಕತೆ ಕಾರ್ಯಕ್ರಮ ಆಯೋಜಿಸಲಾಗಿದೆ‌.

ನಗರದ ರಾಮದೇವ್ ಹತ್ತಿರದ ಸಪ್ನ ಬುಕ್  ಬೆಳಗಾವಿ ಶಾಖೆಯಲ್ಲಿ ಭಾನುವಾರ ಮುಂಜಾನೆ 10 : 30 ಕ್ಕೆ “ಮನದ ಮಾತು” ಮುಕ್ತ ಮಾತುಕತೆ ಹಾಗೂ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಮೊದಲ ಮಾತನ್ನು  ವಿಶ್ವವಾಣಿ ಪತ್ರಿಕೆ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಆಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸರ್ವರಿಗೂ ಮುಕ್ತ ಅವಕಾಶ ನೀಡಲಾಗಿದ್ದು, ಪುಸ್ತಕ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!