
ಕಮಲ ತೆಕ್ಕೆಗೆ ಸುಮಲತಾ ಅಂಬರೀಶ್…?

ಮಂಡ್ಯ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇವತ್ತು ಮಹತ್ವದ ಸುದ್ದಿಘೋಷ್ಠಿ ಕರೆದಿದ್ದು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಇವರು ಮುಂದಿನ ತಮ್ಮ ರಾಜಕೀಯ ಬೆಳವಣಿಗೆ ಹಾಗೂ ಅಸ್ತಿತ್ವಕ್ಕಾಗಿ ಪಕ್ಷ ಸೇರ್ಪಡೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಈಗಾಗಲೇ ಬಿಜೆಪಿ ಹಿರಿಯ ನಾಯಕರ ಜೊತೆಗೂ ಮಾತುಕತೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಈ ಕುರಿತು ಮಾತು ಕೇಳಿಬಂದಿದ್ದರು ಈ ಕುರಿತು ಸುಮಲತಾ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡುತ್ತಿರುವ ಈ ಸಂದರ್ಭದಲ್ಲಿ ಸುಮಲತಾ ನಡೆಸುತ್ತಿರುವ ಸುದ್ದಿಘೋಷ್ಠಿ ಮಹತ್ವ ಪಡೆದಿದೆ.