
ಮಹಿಳಾ ಅಧಿಕಾರಿಗೆ ಕುಂಕುಮ ಇಟ್ಟು ತಗ್ಲಾಕೊಂಡ ಕಾಂಗ್ರೆಸ್ ಸಂಸದ ಬೋಸ್

ಚಾಮರಾಜನಗರ : ಚಾಮರಾಜನಗರ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟು ಸಧ್ಯ ತಗ್ಲಾಕೊಂಡಿದ್ದಾರೆ.
ಆಷಾಢ ಮಾಸದ 3ನೇ ಶುಕ್ರವಾರ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಹಾಗೂ ಸಂಸದ ಸುನೀಲ್ ಬೋಸ್ ಚಾಮುಂಡಿ ಬೆಟ್ಟಕ್ಕೆ ಜೊತೆಯಾಗಿ ಬಂದಿದ್ದರು. ಬೆಂಬಲಿಗರ ಮುಂದೆಯೇ ಸಂಸದರು ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದಾರೆ.
ಇಬ್ಬರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವಾಗ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸಚಿವ ಹೆಚ್.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದಾರೆ.
ಆದರೆ ಈ ಸಲದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಆದರೆ ಈಗ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದಾರೆ. ಫೋಟೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಸಂಸದ ಸುನೀಲ್ ಬೋಸ್ ಹಾಗೂ ಸವಿತಾ ಅವರ ನಡೆ ಸದ್ಯ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾದೆ.