Select Page

Advertisement

ಅಥಣಿ ಕಾಂಗ್ರೆಸ್ ನಲ್ಲಿ ಮತ್ತೊಂದು ವಿಕೇಟ್‌ ಪತನ ; ಸಂಕ ಬಿಜೆಪಿ ಸೇರ್ಪಡೆ

ಅಥಣಿ ಕಾಂಗ್ರೆಸ್ ನಲ್ಲಿ ಮತ್ತೊಂದು ವಿಕೇಟ್‌ ಪತನ ; ಸಂಕ ಬಿಜೆಪಿ ಸೇರ್ಪಡೆ

ಅಥಣಿ : ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಲಕ್ಷ್ಮಣ ಸವದಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುತ್ತಿದ್ದು, ಸಧ್ಯ ಮತ್ತೊಬ್ಬರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ಹಿಂದೆ ವಾಯುವ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕಾಂಗ್ರೆಸ್ ಮುಖಂಡ ಸುನೀಲ ಸಂಕ ಬಿಜೆಪಿ ಸೇರ್ಪಡೆಯಾಗುವುದಾಗಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಮತ್ತೊಂದು ವಿಕೆಟ್ ಬೀಳುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ಅಥಣಿ ಅಖಾಡದಲ್ಲಿ ರಮೇಶ್ ಜಾರಕಿಹೊಳಿ ರಣತಂತ್ರ ಹೆಣೆಯುತ್ತಿದ್ದು, ಕಾಂಗ್ರೆಸ್ ನಾಯಕರಿಗೆ ಗಾಳ ಹಾಕುತ್ತಿದ್ದಾರೆ. ಜೊತೆಗೆ ಲಕ್ಷ್ಮಣ ಸವದಿ ಕೂಡಾ ಭರ್ಜರಿ ಪ್ರಚಾರ ನಡೆಸುತ್ತಿದ್ದು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!