ತೀವ್ರ ಅನಾರೋಗ್ಯ ; ಶಾಸಕ ಸುರೇಶ್ ಕುಮಾರ್ ಗೆ ಐಸಿಯು ನಲ್ಲಿ ಚಿಕಿತ್ಸೆ
ಬೆಳಗಾವಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿರುವ ಸುರೇಶ್ ಕುಮಾರ್ ಅವರಿಗೆ ಬ್ರೈನ್ ಹಾಗೂ ಸ್ಪೈನಲ್ ಕಾರ್ಡ್ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಜ್ವರ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಜ್ವರದಿಂದ ಬಳಲುತ್ತಿರುವ ಸುರೇಶ್ ಕುಮಾರ್ ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ ನಾಲ್ಕು ದಿನ ಚಿಕಿತ್ಸೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.