Video : ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ವೀಡಿಯೋ ವೈರಲ್
ರಾಮನಗರ: ಮಾಗಡಿ (Magadi) ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಶ್ರೀ (Basavalinga Swamiji) ಆತ್ಮಹತ್ಯೆಗೆ ಟ್ವಿಸ್ಟ್ ದೊರೆತ್ತಿದ್ದು, ಸ್ವಾಮೀಜಿ, ಮಹಿಳೆಯೊಂದಿಗೆ ವೀಡಿಯೋ ಕಾಲ್‍ನಲ್ಲಿ ಮಾತನಾಡುತ್ತಿದ್ದ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಬಂಡೆಮಠದ ಶ್ರೀಗಳ ಸಾವಿನ ಸುತ್ತ ದಿನೇ ದಿನೇ ಹೊಸ ಸ್ಫೋಟಕ ವಿಷಯಗಳು ಬಯಲಾಗುತ್ತಿದೆ. ಅಷ್ಟೇ ಅಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅವರು 2 ಪುಟಗಳ ಡೆತ್ ನೋಟ್ ಕೂಡಾ ಬರೆದಿದ್ದು, ಅದರಲ್ಲೂ ಹಲವರ ಹೆಸರನ್ನು ಬರೆದಿದ್ದು. ಆದರೆ ಪ್ರಕರಣಕ್ಕೆ ಸಂಬಂಧಿಸಿ ಕುದೂರು ಪೊಲೀಸರು ಅನಾಮಧೇಯನ ಹೆಸರಿನ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು.
ಅದಾದ ಬಳಿಕ ಸ್ವಾಮೀಜಿಯನ್ನು ಹನಿಟ್ರ್ಯಾಪ್ ಮಾಡಲಾಗಿತ್ತು ಎಂಬ ವಿಷಯ ಹರಡಿತ್ತು. ಅದಕ್ಕೆ ಪುಷ್ಠಿ ನೀಡುವಂತೆ ಸ್ವಾಮೀಜಿ ಡೆತ್‍ನೋಟ್‍ನಲ್ಲೂ ತಿಳಿಸಿದ್ದರು. ಇದೀಗ ಅದೆಲ್ಲದಕ್ಕೂ ಪುಷ್ಠಿ ನೀಡುವ ಸಾಕ್ಷ್ಯ ದೊರೆತ್ತಿದ್ದು, ಸ್ವಾಮೀಜಿ, ಮಹಿಳೆ ಜೊತೆ ವೀಡಿಯೋ ಕಾಲ್‍ನಲ್ಲಿ ಮಾತುಕತೆ ನಡೆಸುತ್ತಿದ್ದ ವೀಡಿಯೋವೊಂದು ವೈರಲ್ ಆಗುತ್ತಿದೆ. ಅಷ್ಟೇ ಅಲ್ಲದೇ ಕಳೆದ 6 ತಿಂಗಳಿಂದ ಆ ಮಹಿಳೆಯ ಸಂಪರ್ಕದಲ್ಲಿ ಸ್ವಾಮೀಜಿ ಇದ್ದರು. ಅಷ್ಟೇ ಅಲ್ಲದೇ ಗೊತ್ತಿಲ್ಲದ ಮಹಿಳೆ ಜೊತೆ ಶ್ರೀಗಳು ಚಾಟಿಂಗ್ ಮಾಡುತ್ತಿದ್ದರು ಎಂಬ ವಿಷಯ ಬಯಲಾಗಿದೆ. ಇದನ್ನೂ