ತಿರುಪತಿಯಲ್ಲಿ ಕಾಲ್ತುಳಿತ ; ಸಾವಿನ ಸಂಖ್ಯೆ 7 ಕ್ಕೆ ಏರಿಕೆ
ತಿರುಪತಿ : ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಟಿಕೆಟ್ ಕೌಂಟರ್ ಬಳಿ ಕಾಲ್ತುಳಿತ ಸಂಭವಿಸಿದ್ದು ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಆಂಧ್ರಪ್ರದೇಶದ ತಿರುಪತಿ ( Tirupati ) ಶ್ರೀಕ್ಷೇತ್ರದಲ್ಲಿ ಜನವರಿ 10, 11, 12 ರಂದು ವೈಕುಂಠ ಏಕಾದಶಿ ದರ್ಶನಕ್ಕೆ ಟಿಕೆಟ್ ನೀಡಲು ನಿರ್ಧರಿಸಲಾಗಿತ್ತು. ಟಿಕೆಟ್ ಪಡೆಯಲು ಜನ ಬಂದ ಹಿನ್ನಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ನಾಳೆ ತಿರುಪತಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ವೈಕುಂಠ ಏಕಾದಶಿ ಎರಡು ದಿನ ಇರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.