Select Page

ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ಟೋಪಣ್ಣವರ

ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ಟೋಪಣ್ಣವರ

ಬೆಳಗಾವಿ : ವಿಪಕ್ಷ ನಾಯಕ ಸಿದ್ದರಾಮಯ್ಯನವರು ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂಬ ನೀಡಿರುವ ಹೇಳಿಕೆ ಇಡೀ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಆಮ್ ಆದ್ಮಿ ಬೆಳಗಾವಿ ಉತ್ತರ ಮತಕ್ಷೇತ್ರದ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಖಂಡಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಅನಾವಶ್ಯಕವಾಗಿ ಲಿಂಗಾಯತ ಸಮುದಾಯದವರ ಬಗ್ಗೆ ಮಾತನಾಡಿದ್ದು ತಪ್ಪು. ಬೆಳಗಾವಿಯ ಬಿಜೆಪಿ ಲಿಂಗಾಯತ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ಅವರು ಮೊಟ್ಟ ಮೊದಲು ತಮ್ಮ ಪಕ್ಷದ ಹೈಕಮಾಂಡ್ ಗೆ ಖಂಡಿಸಬೇಕು. ಕಾರಣ ಬಿ.ಎಸ್.ಯಡಿಯೂರಪ್ಪನವರು, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ ಅವರು ಬಿಜೆಪಿ ನಡೆದುಕೊಂಡ ರೀತಿಯ ಬಗ್ಗೆ ಖಂಡಿಸಲಿಲ್ಲ. ಈಗ ಸಿದ್ದರಾಮಯ್ಯನವರಿಗೆ ಖಂಡಿಸುವ ನೈತಿಕತೆ ಬೆಳಗಾವಿ ಬಿಜೆಪಿ ಲಿಂಗಾಯತ ನಾಯಕರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಲಿಂಗಾಯತ ಸಮುದಾಯವನ್ನು ಕಡೆಗಣನೆ ಮಾಡಿಕೊಂಡು ಬಂದಿದ್ದಾರೆ. ಬೆಳಗಾವಿಯಲ್ಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿಯವರು ಲಿಂಗಾಯತರಿಗೆ ಟಿಕೆಟ್ ನೀಡಲಿಲ್ಲ. ಅಲ್ಲದೆ, ಮೇಯರ್, ಉಪಮೇಯರ್ ಚುನಾವಣೆಯಲ್ಲಿಯೂ ಲಿಂಗಾಯತರನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ. ಘೂಳಪ್ಪ ಹೊಸಮನಿ ಅವರಿಗೆ ಏಕಾಏಕಿ ಬುಡಾ ಅಧ್ಯಕ್ಷ ಸ್ಥಾನ ತೆಗೆದರು. ಆಗ ಯಾಕ ಖಂಡಿಸಲಿಲ್ಲ. ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು. ರಾಷ್ಟ್ರೀಯ ಪಕ್ಷಗಳು ಲಿಂಗಾಯತರನ್ನು ಯಾವಗಲೂ ಕಡೆಗಣಿಸುತ್ತ ಬಂದಿದ್ದಾರೆ ಎಂದರು.

ರವೀAದ್ರ ಬೆಲ್ಲದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!