Select Page

Advertisement

BREAKING- ಭೀಕರ ರೈಲು ಅಪಘಾತ, ಸಾವಿನ ಸಂಖ್ಯೆ 50 ಕ್ಕೆ ಏರಿಕೆ

BREAKING- ಭೀಕರ ರೈಲು ಅಪಘಾತ, ಸಾವಿನ ಸಂಖ್ಯೆ 50 ಕ್ಕೆ ಏರಿಕೆ

ಒಡಿಶಾ : ಯಶವಂತಪುರದಿಂದ ಹೊರಟಿದ್ದ ಹೌರಾ ಎಕ್ಸ್‌ಪ್ರೆಸ್‌ ರೈಲಿಗೆ ಗೈಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಸಾವು, ನೋವಿನ ಸಂಖ್ಯೆ ಅಪಾರವಾಗಿದ್ದು 350 ಕ್ಕೂ ಅಧಿಕ ಜನರಿಗೆ ಗಾಯಗಳಾಗಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲುಗಳ ಮಧ್ಯೆ ಶುಕ್ರವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ರೈಲು-ಪ್ಯಾಸೆಂಜರ್ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಸುಮಾರು 15 ರೈಲು ಭೋಗಿಗಳು ಉರುಳಿ ಬಿದ್ದಿದ್ದು ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ದಟ್ಟವಾಗಿದೆ.

ಸಧ್ಯದ ಮಾಹಿತಿ ಪ್ರಕಾರ ಸುಮಾರು 50 ಕ್ಕೂ ಅಧಿಕ ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣಬಹುದು ಎಂದು ಹೇಳಲಾಗುತ್ತಿದೆ. ಜೊತೆಗೆ ದೇಶದಲ್ಲೇ ಇದು ಅತ್ಯಂತ ದೊಡ್ಡ ರೈಲು ಅಪಘಾತ ಎಂದು ಅಂದಾಜಿಸಲಾಗಿದೆ. ಈಗಾಗಲೇ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ ಹತ್ತು ಲಕ್ಷ ಹಾಗೂ ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ರೈಲ್ವೆ ಮಂತ್ರಿ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!