Select Page

ಆತ್ಮಹತ್ಯೆಗೆ ಶರಣಾದ ಮೂವರು ಸಹೋದರಿಯರು : 9 ದಿನದ ನಂತರ ಪ್ರಕರಣ ಬೆಳಕಿಗೆ

ಆತ್ಮಹತ್ಯೆಗೆ ಶರಣಾದ ಮೂವರು ಸಹೋದರಿಯರು : 9 ದಿನದ ನಂತರ ಪ್ರಕರಣ ಬೆಳಕಿಗೆ

ತುಮಕೂರು : ತಂದೆ, ತಾಯಿಯನ್ನು ಕಳೆದುಕೊಂಡ ಮೂವರು ಅನಾಥ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ನಡೆದ ಒಂಬತ್ತು ದಿನಗಳ ನಂತರ ಶವ ಕೊಳೆತ ಸ್ಥಿತಿಯಲ್ಲಿ ಪ್ರಕರಣ ಇಂದು ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ಘಟನೆ ನಡೆದಿದೆ. ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು. ಕಳೆದ ಒಂಬತ್ತು ದಿನಗಳ ಹಿಂದೆ ಘಟನೆ ಮಡೆದಿದ್ದು ಎನ್ನಲಾಗಿದ್ದು ಶವಗಳು ಕೊಳೆತು ವಾಸನೆ ಬಂದಾಗ ಮಾಹಿತಿ ತಿಳಿದುಬಂದಿದೆ.

ಹಲವು ವರ್ಷಗಳ ಹಿಂದೆಯೇ ತಂದೆ-ತಾಯಿ ಮೃತಪಟ್ಟಿದ್ದರು. ತಂದೆ-ತಂದೆಯನ್ನು ಕಳೆದುಕೊಂಡ ಅನಾಥರಾಗಿದ್ದ ಸಹೋದರಿಯರು ಅಜ್ಜಿ ಜೊತೆಯಲ್ಲಿ ವಾಸವಿದ್ದರು. ಆದ್ರೆ, ಆಸರೆಯಾಗಿದ್ದ ಅಜ್ಜಿಯೂ ಸಹ ಇತ್ತೀಚೆಗೆ ಮರಣ ಹೊಂದಿದ್ದರು. ಬಳಿಕ ಸಹೋದರಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮೂವರು ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಸಹೋದರಿಯರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಎಸ್​ಪಿ ಸಿದ್ದಾರ್ಥ್ ಗೋಯೆಲ್, ಸಿಪಿಐ ನಿರ್ಮಲಾ, ಪಿಎಸ್​ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!