ಹೃದಯಾಘಾತದಿಂದ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಜಿ ಲಿಂಗೈಕ್ಯ : ಗಣ್ಯರ ಕಂಬನಿ
ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕುಪ್ಪುರೂ ಕಣ್ವಗುಪ್ಪೆಯ ಶ್ರೀ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಜಿಗಳು (55) ಹೃದಯಾಘಾತದಿಂದ ಇಂದು ಲಿಂಗೈಕ್ಯರಾಗಿದ್ದಾರೆ.
ಕುಪ್ಪುರೂ ಮಠದ ಯತೀಶ್ವರ ಸ್ವಾಮೀಜಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಉಸಿರಾಟದ ಸಮಸ್ಯೆಯಿಂದಾಗ ಹೃದಯಾಘವಾಗಿ ನಿಧನ ಹೊಂದಿದ್ದಾರೆ.
ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮಾಧುಸ್ವಾಮಿ, ಗೋಕಾಕ್ ಯುವ ಕಾಂಗ್ರೆಸ್ ಮುಖಂಡ ಬಾಲಾಜಿ ಸಾವಳಗಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.