Select Page

Advertisement

ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳು ಸಸ್ಪೆಂಡ್ ; ಸರಕಾರಕ್ಕೆ ಮುಜುಗರ

ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳು ಸಸ್ಪೆಂಡ್ ; ಸರಕಾರಕ್ಕೆ ಮುಜುಗರ




ಬೆಂಗಳೂರು : ಅಧಿವೇಶನದಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನದಿಂದ ಎದ್ದು ಹೊರ ನಡೆದ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವೊಲಿಸಿದ್ದಾರೆ.

ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಲ್ಲದೇ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಉತ್ತರ ಒದಗಿಸದ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡಲು ಸಿಎಂಗೆ ಸ್ಪೀಕರ್ ತಿಳಿಸಿರುವ ಹಿನ್ನೆಲೆ, ಹಿರಿಯ ಐಎಎಸ್ ಅಧಿಕಾರಿಗಳೂ ಆದ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ನೀಟಿಸ್ ನೀಡಲಾಗಿದೆ. ಮತ್ತೊಂದೆಡೆ ಸಿಎಂ ಸೂಚನೆ ಹಿನ್ನೆಲೆ ಮಧ್ಯಾಹ್ನ ಸಿಎಸ್‌ ಶಾಲಿನಿ ರಜನೀಶ್ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಅಂತಿಮವಾಗಿ ಸ್ವೀಕರ್ ಸಂಧಾನ ಯಶಸ್ವಿ ಹಿನ್ನೆಲೆ ವಿಧಾನಸಭೆ ಕಲಾಪ ಪುನಾರಂಭವಾಗಿದೆ. ಸಭೆಯಲ್ಲಿ ಲಿಖಿತ ರೂಪದ ಪ್ರಶ್ನೆಗಳಿಗೆ ಉತ್ತರ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲ ಶಾಸಕರಿಗೆ ಉತ್ತರ ಸಿಗಬೇಕು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕರೆಲ್ಲರೂ ಸೇರಿ ಚರ್ಚಿಸಿದ್ದೇವೆ. ಎಲ್ಲರಿಗೂ ಉತ್ತರ ಸಿಗುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿರೋದಾಗಿ ಸ್ಪೀಕರ್ ಖಾದರ್ ಮಾಹಿತಿ ನೀಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!