
ಅಪಘಾತದಲ್ಲಿ ರೈಲ್ವೆ ಇಲಾಖೆ ನೌಕರ ಸಾವು ; ಕಂಬನಿ ಮಿಡಿದ ಗ್ರಾಮಸ್ಥರು

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದಯ್ ಯಳವಿ ( 40 ) ಮೃತಪಟ್ಟಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕಳೆದ ಒಂದು ವಾರದ ಹಿಂದೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿರಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯುವಕ ಉದಯ ಯಳವಿ ತಮ್ಮ ಸೌಮ್ಯ ಸ್ವಭಾವದಿಂದ ಅಪಾರ ಸಂಖ್ಯೆಯಲ್ಲಿ ಜನರ ಪ್ರೀತಿ ಗಳಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ನಿಧನ ಹೊಂದಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಶುಕ್ರವಾರ ನೆರವೇರಿತು. ಇವರು ಇಬ್ಬರು ಪುತ್ರರು, ಪತ್ನಿ ಸೇರಿದಂತೆ ಅಪಾರ ಬಂಧು, ಬಳಗ ಅಗಲಿದ್ದಾರೆ. ಉದಯ್ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.