
ಉದಯಗಿರಿ ಗಲಭೆಗೆ ಮೂಲ ಕಾರಣ ಈ ಮುಷ್ತಾಕ್ ಮಕ್ಬೋಲಿ

ಮೈಸೂರು : ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಂಧಿಸಿ ದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಪ್ರಕರಣದ ಹಿಂದೆ ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬಾತನ ಪ್ರಚೋದನಾಕಾರಿ ಭಾಷಣ ಇದೆ ಎಂಬ ಅನುಮಾನ ವ್ಯಕ್ತವಾಗಿದೆ. ಮುಷ್ತಾಕ್ ಭಾಷಣದ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಮುಷ್ತಾಕ್ಗಾಗಿ ಹುಡುಕಾಟ ನಡೆಸಿದ್ದಾರೆ.
ಗಲಭೆ ನಡೆಯುವ ಮುನ್ನ ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬ ವ್ಯಕ್ತಿ ಮೈಕ್ ಹಿಡಿದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಪ್ರಚೋದನೆ ನೀಡಿದ ಮುಷ್ತಾಕ್ ಮಕ್ಬೋಲಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮುಸ್ಲಿಂ ರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ನಿಲ್ಲಿ.ಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು ಮರಣದಂಡನೆ ವಿಧಿಸಬೇಕು.
ನಿಮ್ಮ ಇಚ್ಛೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುವುದು. ಮೈಸೂರಿನ ಎಲ್ಲ ಮುಸ್ಲಿಂರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಈ ವಿಡಿಯೋವನ್ನು ಎಲ್ಲ ಕಡೆ ಶೇರ್ ಮಾಡಿ” ಎಂದು ಮೈಕ್ ಹಿಡಿದು ಭಾಷಣ ಮಾಡಿದ ವಿಡಿಯೋ ವೈರಲ್ ಆಗಿದೆ.