
ಮಳೆ ಆರ್ಭಟ ; ಉಡುಪಿಯ ನಾಲ್ಕು ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇರುವ ಹಿನ್ನಲೆಯಲ್ಲಿ ನಾಲ್ಕು ತಾಲೂಕುಗಳಲ್ಲಿ ತಹಶೀಲ್ದಾರ್ ಇಂದು (ಜುಲೈ31, ಬುಧವಾರ) ರಜೆ ಘೋಷಣೆ ಮಾಡಿದ್ದಾರೆ.
ಉಡುಪಿ, ಕಾಪು, ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ರಜೆ ಘೋಷಣೆ ಮಾಡಲಾಗಿದೆ.
ನಾಲ್ಕು ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.