ಕ್ರಿಕೆಟ್ ಆಡುವಾಗಲೇ ಹೃದಯಾಘಾತ ; ಗ್ರಾ.ಪಂ ಸಿಬ್ಬಂದಿ ಸಾವು
ಮಂಗಳೂರು : ಕ್ರಿಕೆಟ್ ಆಡುವಾಗ ಹೃದಯಾಘಾತ ಸಂಭವಿಸಿದ್ದು ಯುವಕ ಸ್ಥಳದಲ್ಲೇ ಸಾವಣಪ್ಪಿರುವ ಘಟನೆ ಬಜಪೆಯ ಮುಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.
ಭಾನುವಾರ ಸಂಜೆ ಕ್ರಿಕೆಟ್ ಆಡುವ ಸಂದರ್ಭದಲ್ಲಿ ಪ್ರದೀಪ್ ಪೂಜಾರಿ (31) ಮೃತಪಟ್ಟಿದ್ದಾನೆ. ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ ಉದ್ಯೋಗಿ ಆಗಿದ್ದರು. ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು.
2012ರಲ್ಲಿ ಪಡುಪೆರಾರ ಗ್ರಾಮ ಪಂಚಾಯಿತಿಗೆ ಸೇರಿದ ಪ್ರದೀಪ್, ಕಾಯರಣೆ ನವರಂಗ ಗೆಳೆಯರ ಬಳಗದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದು, ಬಜರಂಗದಳ ಹಾಗೂ ಜವನೆರ್ ಪೆರಾರ್ ಕಾರ್ಯಕರ್ತರಾಗಿದ್ದರು.

