ಉಡುಪಿ : ನಗರದ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

ಜೊತೆಗೆ ಓದುವ ಸಹಪಾಠಿಗಳಿಂದ ಈ ಕೃತ್ಯ ನಡೆದಿದ್ದು, ಯುವತಿಯರ ಖಾಸಗಿ ವೀಡಿಯೋ ಮಾಡಿ ವಾಟ್ಸಪ್ ಗ್ರುಪ್ ಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕೆಮರಾ ಇಟ್ಟು, ಹಿಂದೂ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವೀಡಿಯೊ ಚಿತ್ರೀಕರಿಸಿದ್ದರು. 

ಚಿತ್ರೀಕರಣ ಮಾಡಿದ್ದ ವೀಡಿಯೋ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದರು. ಇದು ಗೊತ್ತಾಗುತ್ತಿದ್ದಂತೆ ಹಿಂದೂ ವಿದ್ಯಾರ್ಥಿನಿಯರು ಆಕ್ಷೇಪಿಸಿದ್ದರು. ಈ ಸಂದರ್ಭದಲ್ಲಿ ಇವರ ಮಧ್ಯೆ ತೀವ್ರತರದ ವಾಗ್ವಾದ ನಡೆದಿತ್ತು.

ಆಸ್ಪತ್ರೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರಗಿಸಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ