
BREAKING : ಕಾಂಗ್ರೆಸ್ ಪಕ್ಷ ತೊರೆದ ಮಾಜಿ ಸಚಿವ

ಉಡುಪಿ : ಮಾಜಿ ಸಚಿವ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆದಿದ್ದಾರೆ.
ಈ ಕುರಿತು ಕೆಪಿಸಿಸಿಗೆ ಪತ್ರ ಬರೆದಿರುವ ಪ್ರಮೋದ್ ಮಧ್ವರಾಜ್. ಕಾಂಗ್ರೆಸ್ ಪಕ್ಷದಲ್ಲಿ ಈವರೆಗೂ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಕ್ಕಾಗಿ ಧನ್ಯವಾದಗಳು. ರಾಜ್ಯದ ನಂ ಒನ್ ಶಾಸಕನಾಗಿಯೂ ನಾನು ಕೆಲಸ ಮಾಡಿದ್ದೇನೆ. ಆದರೆ ಸಧ್ಯದ ಪರಿಸ್ಥಿತಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ತೀರಾ ಹದಗೆಟ್ಟ ಹಿನ್ನಲೆಯಲ್ಲಿ ನಾನು ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಪಕ್ಷದ ಕಾರ್ಯಕರ್ತರಿಗೂ ಕೃತಜ್ಞತೆ ತಿಳಿಸಿದ್ದಾರೆ.
ಪ್ರಮೋದ್ ಮಧ್ವರಾಜ್ ಉಡುಪಿ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ 72,902 ಮತಗಳನ್ನು ಪಡೆದು ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು.

2019ರ ಲೋಕಸಭೆ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಬಿಜೆಪಿಯ ಶೋಭಾ ಕರಂದ್ಲಾಜೆ ಎದುರು ಪರಭಾವಗೊಂಡಿದ್ದರು.
ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಎಂದು ಪಕ್ಷ ಸೇರಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ.