Select Page

Advertisement

UPSC ಫಲಿತಾಂಶ ; ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಚಿಕ್ಕೋಡಿ ಯುವಕ

UPSC ಫಲಿತಾಂಶ ; ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಚಿಕ್ಕೋಡಿ ಯುವಕ

ಬೆಂಗಳೂರು : ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆ 2025ರ ಅಂತಿಮ ಫಲಿತಾಂಶ ಶುಕ್ರವಾರ ಹೊರಬಿದ್ದಿದೆ. ಒಟ್ಟು 958 ಅಭ್ಯರ್ಥಿಗಳನ್ನು ಐಎಎಸ್, ಐಎಫ್‌ಎಸ್, ಐಪಿಎಸ್ ಮತ್ತು ಇತರ ಕೇಂದ್ರ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ.

ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಕರ್ನಾಟಕದಲ್ಲಿ 22 ವ್ಯಕ್ತಿಗಳು ಆಯ್ಕೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ, ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಕಿರಣ್ ಸಣ್ಣಪ್ಪ ಕಮತೆ (29) ದೇಶಕ್ಕೆ 53ನೇ ರ‍್ಯಾಂಕ್ ಪಡೆದಿದ್ದು, ರಾಜ್ಯದಲ್ಲಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಪದವಿ ಪಡೆದಿರುವ ಕಿರಣ ಕಮತೆ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಕಿರಣ ಅವರು ಇತ್ತೀಚೆಗೆ ಕೆಪಿಎಸ್‌ಪಿ ಮೇನ್ಸ್ ಪರೀಕ್ಷೆಯಲ್ಲೂ ಕೂಡ ಉತ್ತೀರ್ಣರಾಗಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯ 6ನೇ ಪ್ರಯತ್ನದಲ್ಲಿ ಯಶಸ್ಸು ಕಂಡಿರುವ ಕಿರಣ ಕಮತೆ, ಮೂರು ಬಾರಿ ಮೇನ್ಸ್ಗೆ ಹೋಗಿ ವಿಫಲರಾಗಿದ್ದರು.

ಕಿರಣ ತಂದೆ ಡಾ.ಸಣ್ಣಪ್ಪ ಕಮತೆ ನಿಡಸೋಸಿಯ ಹೀರಾ ಶುಗರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ರುಕ್ಮಿಣಿ ಗೃಹಿಣಿ ಆಗಿದ್ದಾರೆ. ಸಹೋದರಿ ಕೀರ್ತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ.

1, 2ನೇ ತರಗತಿಯನ್ನು ಮಹಾರಾರಾಷ್ಟçದ ಬೀಡ್ ಜಿಲ್ಲೆಯ ಅಂಬೆಜೋಗಾಯಿಯಲ್ಲಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಓದಿದ ಕಿರಣ, 3ರಿಂದ 8ನೇ ತರಗತಿಯನ್ನು ಹುಬ್ಬಳ್ಳಿಯ ಎಂ.ಆರ್.ಸಾಖರೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತರು. 9, 10ನೇ ತರಗತಿ ಗದಗ ಕೆಎಲï‌ಇ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ನಿಪ್ಪಾಣಿಯ ಜಿ.ಐ.ಬಾಗೇವಾಡಿ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಮುಗಿಸಿದ್ದರು.


Advertisement

Leave a reply

Your email address will not be published. Required fields are marked *

error: Content is protected !!