ವೇಶ್ಯಾವಾಟಿಕೆ ಪ್ರಕರಣ ; ಪಿಎಸ್ಐ ತಲೆದಂಡ
ಮುರುಡೇಶ್ವರ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಲ್ಲಿರುವ ಐಲ್ಯಾಂಡ್ ಹೊಟೆಲ್ ನಲ್ಲಿ ವೇಶ್ಯಾವಾಟಿಕೆ ಸೇರಿ ಅಕ್ರಮ ಚಟುವಟಿಕೆ ತಡೆಗಟ್ಟುವಲ್ಲಿ ವಿಫಲರಾದ ಹಿನ್ನಲೆಯಲ್ಲಿ ಮುರುಡೇಶ್ವರ ಠಾಣೆ ಪಿಎಸ್ಐ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರವಾಸಿಗರ ನೆಚ್ಚಿನ ತಾಣವಾದ ಮುರುಡೇಶ್ವರಕ್ಕೆ ಪ್ರತಿದಿನ ಸಾವಿರಾರು ಜನ ಆಗಮಿಸುತ್ತಾರೆ. ಆದರೆ ಇಲ್ಲಿ ನಡೆಯುವ ಅಕ್ರಮ ಚಟುವಟಿಕೆ ತಡೆಗಟ್ಟುವಲ್ಲಿ ಮುರುಡೇಶ್ವರ ಠಾಣೆ ಪಿಎಸ್ಐ ಮಂಜುನಾಥ ವಿಫಲರಾದ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.
ಅಷ್ಟೇ ಅಲ್ಲದೆ ಅಕ್ರಮ ಚಟುವಟಿಕೆ ತಡೆಗಟ್ಟಲು ಸೂಕ್ತ ನಿರ್ದೇಶನ ನೀಡದ ಕಾರಣ ಭಟ್ಕಳ ಠಾಣೆ ಪೊಲೀಸ್ ನಿರೀಕ್ಷಕರ ವಿರುದ್ಧ ಕ್ರಮಕ್ಕೆ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.