Select Page

Breaking : ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

Breaking : ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಲಕ್ಷ್ಮೇಶ್ವರ : ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.



ಮಠದ ವಸತಿ ನಿಲದಲ್ಲಿರುವ ಮಕ್ಕಳಿಂದ ವಚನಾನಂದ ಶ್ರೀಗಳು ಮಸಾಜ್ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಬಾಲಕನ ತಾಅಯಿಯೊಬರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ದಾಅಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.



ಇದೀಗ ಲಕ್ಷ್ಮೀಶ್ವರ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ ಐ ಆರ್, ಕೃತ್ಯ ನಡೆದ ಸ್ಥಳದ ವ್ಯಾಪ್ತಿ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಕೇಸ್ ವರ್ಗಾಯಿಸಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ದೂರುದಾರರ ಹೇಳಿಕೆ ಪಡೆದುಕೊಂಡಿದ್ದಾರೆ.


Advertisement

Leave a reply

Your email address will not be published. Required fields are marked *

error: Content is protected !!