Select Page

Advertisement

ಟಿಕೆಟ್ ಕೈ ತಪ್ಪುವ ಭೀತಿಯಲ್ಲಿ ವೀಣಾ ಕಾಶಪ್ಪನವರ ಕಣ್ಣೀರು

ಟಿಕೆಟ್ ಕೈ ತಪ್ಪುವ ಭೀತಿಯಲ್ಲಿ ವೀಣಾ ಕಾಶಪ್ಪನವರ ಕಣ್ಣೀರು

ಬಾಗಲಕೋಟೆ : ಈ ಬಾರಿ ಬಾಗಲಕೋಟೆ ಲೋಕಸಭಾ ಚುನಾವಣಾ ಸ್ಪರ್ಧೆಗೆ ಭರ್ಜರಿ ತಯಾರಿ ನಡೆಸಿದ್ದ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾದ ಹಿನ್ನಲೆಯಲ್ಲಿ ಕಣ್ಣೀರು ಹಾಕಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇ. ಆದರೆ ಹೊರಗಿನವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದ್ದು, ಇದರಿಂದ ನನಗೆ ಅನ್ಯಾಯ ಆಗಿದೆ ಎಂದು ಕಣ್ಣೀರು ಹಾಕಿದರು.

ವಿಜಯಪುರದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಟಿಕೆಟ್ ಕೊಡಲಾಗುತ್ತದೆ ಎಂದು ಹೇಳಲಾಗುತ್ತಿದ್ದು ಇದರಿಂದ ವೀಣಾ ಕಾಶಪ್ಪನವರ ನೊಂದಿದ್ದಾರೆ. ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ಟಿಕೆಟ್ ನೀಡಿ ನನಗೆ ಬಾರಿ ಮೋಸ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್ ಕೈತಪ್ಪುತ್ತದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಬಾಗಲಕೋಟೆ ನಗರದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಗೋ ಬ್ಯಾಕ್ ಸಂಯುಕ್ತಾ ಪಾಟೀಲ್ ಎಂಬ ಆಕ್ರೋಶ ಹೊರಹಾಕಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!