ವಿಧಾನಸೌಧದಲ್ಲಿ ನಮಾಜ್ ಮಾಡಲು ಕೊಠಡಿ ಕೇಳಿದ ಶಾಸಕ..!
ಬೆಂಗಳೂರು : ವಿಧಾನಸೌಧದಲ್ಲಿ ನಮಾಜ್ ಮಾಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡುವಂತೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಿ.ಎಮ್ ಫಾರುಕ್ ಸೋಮವಾರ ಮನವಿ ಮಾಡಿದ್ದಾರೆ.
ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಮುಸ್ಲಿಂ ಸದಸ್ಯರಿಗೆ ಅನುಕೂಲ ಆಗುವ ದೃಷ್ಟಿಯಿಂದ ವಿಧಾನಸೌಧದಲ್ಲಿ ನಮಾಜ್ ಮಾಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಮುಸ್ಲಿಂ ಶಾಸಕರು ಹಾಗೂ ವಿಧಾನಸೌಧದ ಸಿಬ್ಬಂದಿಗೆ ಸಹಕಾರಿಯಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿ. ವಿಧಾನಸಭೆ ಸಭಾಧ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ಸಂದರ್ಭದಲ್ಲಿ ನಾಯಕರ ಜೊತೆ ಚರ್ಚಿಸಿ ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


