ಬಾಲಚಂದ್ರ ಪಕ್ಕದಲ್ಲೇ ಕುಳಿತು ಜಾರಕಿಹೊಳಿ ಸಹೋದರರ ಬಗ್ಗೆ ಏನಂದ್ರು ವಿಜಯೇಂದ್ರ…?
ಬೆಳಗಾವಿ : ರಮೇಶ್ ಜಾರಕಿಹೊಳಿ ಅವರನ್ನು ಹುಡುಕಿದೆ ಸಿಕ್ಕಿಲ್ಲ, ಅದಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದರು.
ಬೆಳಗಾವಿ ನಗರದಲ್ಲಿ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಸತೀಶ್ ಜಾರಕಿಹೊಳಿ ಅವರ ಭೇಟಿ ನನ್ನ ಕ್ಷೇತ್ರದ ಅಭಿವೃದ್ಧಿ ಸಲುವಾಗಿ. ಈ ಕಾರಣಕ್ಕೆ ನಾನು ಅವರನ್ನು ಭೇಟಿಯಾಗಿದ್ದು. ಐದು ವರ್ಷ ವಿರೋಧಪಕ್ಷದ ಜಾಗದಲ್ಲಿ ಇದ್ದು ನಾವು ಕೆಲಸ ಮಾಡುತ್ತೇವೆ ಎಂದರು.
ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ನಿಮ್ಮ ನಾಯಕತ್ವ ಇನ್ನೂ ಒಪ್ಪಿಕೊಂಡಿಲ್ಲ ಎಂಬ ವಿಚಾರಕ್ಕೆ ಮಾತನಾಡಿ. ಕೆಲವರಿಗೆ ನನ್ನನ್ನು ಭೇಗ ಒಪ್ಪಿಕೊಳ್ಳಲು ಆಗಲ್ಲ. ಇನ್ನೂ ಸ್ವಲ್ಪ ಸಮಯ ಹಿಡಿಯಬಹುದು. ಹೈಕಮಾಂಡ್ ನನಗೆ ಉತ್ತಮ ಅವಕಾಶ ನೀಡಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.


