ಮಹಾಕುಂಭಮೇಳದಲ್ಲಿ ವಿಜಯೇಂದ್ರ ಪುಣ್ಯಸ್ನಾನ
ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪುಣ್ಯಸ್ನಾನ ಮಾಡಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ನೆರವೇರಿದ ನಂತರ ವಿಜಯೇಂದ್ರ ಅವರಿಗೆ ಅಲ್ಲಿನ ಸಾಧು ಸಂತರು ಆಶಿರ್ವಾದ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈಗಾಗಲೇ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ.


