ಯಡಿಯೂರಪ್ಪ ಪುತ್ರ ವಿಜಯೇಂದ್ರನಿಗೆ ಶುಭಾಶಯ ಎಂದ ಕಾಂಗ್ರೆಸ್ ; ರಾಹುಲ್ ಗಾಂಧಿ, ಪ್ರಿಯಾಂಕ್ ಖರ್ಗೆ ಯಾರೆಂದ ಬಿಜೆಪಿಗರು…..!
ಬೆಂಗಳೂರು : ಇತ್ತ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದ್ದು ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಅವರಿಗೆ ಪಟ್ಟ ಕಟ್ಟಿದೆ. ಆದರೆ ಈ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಕಾಂಗ್ರೆಸ್ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಜಯೇಂದ್ರ ಆಯ್ಕೆಯನ್ನು ವ್ಯಂಗ್ಯವಾಡಿದೆ. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಶುಭಾಶಯ ಎಂದಿದ್ದು ಇದಕ್ಕೆ ಬಿಜೆಪಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರ ಅವರ ವೈಯಕ್ತಿಕ ಶಕ್ತಿ ಮೇಲೆ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರ ಹುದ್ದೆ ನೀಡಿದೆ. ಈ ಹಿಂದೆ ಉಪ ಚುನಾವಣೆಯಲ್ಲಿ ಅವರ ಶಕ್ತಿ ಏನು ಎಂಬುದು ಗೊತ್ತು. ಆದರೆ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತದೆ ಎಂದು ಬಿಜೆಪಿ ಆರೋಪಿಸಿದೆ.
ಅಷ್ಟೇ ಅಲ್ಲದೆ ವಿಜಯೇಂದ್ರ ಯಡಿಯೂರಪ್ಪ ಮಗ ಎಂಬ ಕಾರಣ ನೀಡುವ ಕಾಂಗ್ರೆಸ್. ಮಲ್ಲಿಕಾರ್ಜುನ ಖರ್ಗೆ ಮಗ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾರು ಎಂದು ಪ್ರಶ್ನೆ ಮಾಡುವ ಮೂಲಕ ಬಿಜೆಪಿ ಟಾಂಗ್ ನೀಡಿದೆ.


