ಮದುವೆ ವಯಸ್ಸಿನ ಹೆಣ್ಣುಮಕ್ಕಳಿದ್ದಾರೆ ; ಜಡ್ಜ್ ಎದುರು ವಿನಯ್ ಕುಲಕರ್ಣಿ ಕಣ್ಣೀರು..!

ಬೆಂಗಳೂರು : ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ ಎಂದು ಕೋರ್ಟ್ ಆದೇಶ ಹೊರಡಿಸಿದೆ.
ಇಂದು ಶಿಕ್ಷೆಯ ಪ್ರಮಾಣ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ವಿನಯ್ ಕುಲಕರ್ಣಿ ಮನವಿ ಮಾಡಿಕೊಂಡಿದ್ದಾರೆ. ರಾಜಕೀಯ ದ್ವೇಷಕ್ಕಾಗಿ ನನ್ನ ಮೇಲೆ ಕೇಸ್ ಹಾಕಲಾಗಿದೆ ಎಂದರು.
ನ್ಯಾಯಾಧೀಶರ ಮುಂದೆ ವಿನಯ್ ಕುಲಕರ್ಣಿ ಅವರು ನಾನು ಕಳೆದ 27 ವರ್ಷಗಳಿಂದ ರಾಜಕೀಯದಲ್ಲಿರುವೆ. ಕ್ಷೇತ್ರದಲ್ಲಿ ಯಾರಿಗೂ ನೋವು ಮಾಡಿಲ್ಲ. ಹಸು ಸಾಕುತ್ತಿರುವೆ. ನನಗೆ ಮದುವೆ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ದಯವಿಟ್ಟು ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ.
ಅಪರಾಧಿಗಳ ಪರ ವಾದ ಆಲಿಸಿದ ನ್ಯಾಯಾಲಯದ ಶಿಕ್ಷೆಯ ಪ್ರಮಾಣವನ್ನು ನಾಳೆಗೆ ಮುಂದೂಡಿದ್ದಾರೆ.


