ಗೌರವ ಇಲ್ಲದ ಕಡೆ ನಾವು ಇರುವುದಿಲ್ಲ ; ರಾಜೀನಾಮೆ ಕೊಟ್ಟು ಹೊರಬರಲು ಸಿದ್ಧ ಎಂದ ವಿನಯ್ ಕುಲಕರ್ಣಿ
ಬೆಂಗಳೂರು : ಎಲ್ಲಿ ಗೌರವ ಸಿಗುವುದಿಲ್ಲ ಅಲ್ಲಿ ನಾವು ಇರುವುದಿಲ್ಲ. ರಾಜೀನಾಮೆಗೆ ಹಿಂಜರಿಯುವುದಿಲ್ಲ ಎಂದು ಬಹಿರಂಗವಾಗಿ ಸಿದ್ದು ಸರ್ಕಾರದ ಸಚಿವರ ಮೇಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅಸಮಾಧಾನ ಹೊರಹಾಕಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ತಮಗೆ ಬೇಕಾದ ಕಂಪನಿಗಳಿಗೆ ಪರವಾನಗಿ ನೀಡಿ, ಬೇಡವಾದವನ್ನು ಬ್ಲ್ಯಾಕ್ ಲಿಸ್ಟ್ ಗೆ ಹಾಕುವ ಕೆಲಸ ನಡೆಯುತ್ತಿದೆ. ಈಗಾಗಲೇ ನಗರಾಭಿವೃದ್ಧಿ ಸಚಿವ ಸುರೇಶ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಲಾಗಿದೆ. ಏನು ಕ್ರಮ ಕೈಗೊಳ್ಳುತ್ತಾರೆ ನೋಡುವೆ ಎಂದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಸೇರಿದರೆ ಅವರು ಸಚಿವರು. ಅವರೇನು ಮೇಲಿಂದ ಬಂದಿಲ್ಲ. ಸಚಿವರು ಮೊದಲು ಶಾಸಕರೇ ಅಲ್ವಾ? ಅದನ್ನು ಅರ್ಥ ಮಾಡಿಕೊಳ್ಳಿ,
ಅವರಿಗೂ ನೋಟಿಸ್ ಕೊಡಲೇಬೇಕಾಗುತ್ತದೆ. ಪ್ರಸಂಗ ಬಂದರೆ ದಾಖಲೆ ಕೊಡುತ್ತೇನೆ. ನಾನು ಭಯಪಡುವುದಿಲ್ಲ ಬಹಿರಂಗವಾಗಿಯೇ ಹೇಳುತ್ತೇನೆ. ಗೌರವ ಇಲ್ಲದ ಕಡೆ ನಾವು ಯಾಕೆ ಇರಬೇಕು ಎಂದು ಭೈರತಿ ಸುರೇಶ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.