ಕೊಲೆ ಪ್ರಕರಣ : ಮತ್ತೆ ಜೈಲು ಸೇರಿದ ಮಾಜಿ ಸಚಿವ ವಿನಯ್ ಕುಲಕರ್ಣಿ
ಬೆಂಗಳೂರು : ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದ್ದು ಮತ್ತೆ ಜೈಲು ಸೇರಿದ್ದಾರೆ.
ಹೌದು ಸಾಕ್ಷಿಗಳಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ವಿನಯ್ ಕುಲಕರ್ಣಿ ಅವದ ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ಗೆ ಹಾಜರಾದ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ.
ಕೋರ್ಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್ ಮಾಡಲಾಗಿದೆ. ಈ ವೇಳೆ ಶಾಸಕ ವಿನಯ್ ಕುಲಕರ್ಣಿ ಆಪ್ತರು ಕಣ್ಣೀರು ಹಾಕಿದ್ದಾರೆ.
2016 ರಲ್ಲಿ ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿದ್ದು, ಶಾಸಕ ವಿನಯ್ ಕುಲಕರ್ಣಿ ಪಾತ್ರ ಇದೆ ಎಂಬ ಆರೋಪವಿದೆ.


