
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಲು ವಿನಯ ನಾವಲಗಟ್ಟಿ ಸೂಚನೆ

ಬೆಳಗಾವಿ : ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಯಶಸ್ವಿಯಾಗಲು ಅಧಿಕಾರಿಗಳ ಪಾತ್ರ ಬಹಳ ಮಹತ್ತರವಾದದ್ದು. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯ ನಿರ್ವಹಿಸಿ, ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು.
ಜಿಲ್ಲಾ ಪಂಚಾಯತ್ ವೀಡಿಯೊ ಕಾನ್ಫರೆನ್ಸ್ ಹಾಲ್ ನಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯ ಪ್ರಕಾರ 1865 ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿವೆ. ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ ಆಹಾರ ಇಲಾಖೆ ಅಧಿಕಾರಿಗಳು ವಿವರಿಸಿದರು.
ಜಿಲ್ಲೆಯಲ್ಲಿ 67,696 ಅಂತ್ಯೋದಯ 10,73,661 ಬಿಪಿಎಲ್ ಸೇರಿ ಒಟ್ಟು 11,41,476 ಪಡಿತರ ಚೀಟಿಗಳು ಚಾಲ್ತಿಯಲ್ಲಿದ್ದು, ಅನ್ನಭಾಗ್ಯ ಯೋಜನೆಯಡಿ ಒಟ್ಟು 39,60,610 ಫಲಾನುಭವಿಗಳು ಉಚಿತವಾಗಿ ಪಡಿತರ ಆಹಾರಧಾನ್ಯ ಸದುಪಯೋಗ ಪ್ರತಿ ಮಾಹೆ ನಡೆಯುತ್ತಿದ್ದಾರೆ. ಅದೇ ರೀತಿಯಲ್ಲಿ 3,30,446 ಎನ್.ಪಿ.ಎಚ್.ಎಚ್ ಪಡಿತರ ಚೀಟಿಗಳು ಸೇರಿ ಒಟ್ಟು 14,71,803 ಪಡಿತರ ಚೀಟಿಗಳಿರುತ್ತವೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯನ್ನು ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, 2023-24ನೇ ಸಾಲಿನಲ್ಲಿ ಪಾಸಾದ ಪದವಿ/ಡಿಪ್ಲೊಮಾ ಅಭ್ಯರ್ಥಿಗಳಿಗೆ 2 ವರ್ಷದವರೆಗೆ 3000/1500 ಗಳನ್ನು ನೀಡಲಾಗುತ್ತಿದೆ.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 34284 ಪದವಿ ಹಾಗೂ 588 ಡಿಪ್ಲೊಮಾ ಅಭ್ಯರ್ಥಿಗಳು ಸೇರಿ ಒಟ್ಟು 34872 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಜನವರಿ 2024 ರಿಂದ ಜೂನ್ 2025 ರವರೆಗೆ ಡಿಬಿಟಿ ಮುಖಾಂತರ ಒಟ್ಟಾರೆ ಐವತ್ತು ಕೋಟಿ ಮೂವತ್ತು ಮೂರು ಲಕ್ಷದ ಹದಿನಾರು ಸಾವಿರ (56,33,16,000) ಜಮೆಯಾಗಿರುತ್ತವೆ.
ಗೃಹಜ್ಯೋತಿ ಯೋಜನೆ ಜಾರಿಯಾದ ನಂತರ ಮನೆಗಳಲ್ಲಿ ವಿದ್ಯುತ್ ಬಳಕೆ ಸಮರ್ಪಕವಾಗಿದೆ. ಪ್ರತಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ವಿವರಿಸಿದರು.
ಶಕ್ತಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 3 ವಿಭಾಗಗಳ (ಬೆಳಗಾವಿ, ಚಿಕ್ಕೋಡಿ ಹಾಗೂ ಧಾರವಾಡ) ಅಡಿಯಲ್ಲಿ ಒಟ್ಟು 15 ಬಸ್ ಘಟಕಗಳಿಂದ ಒಟ್ಟು 1604 ಬಸ್‌ಗಳು ಪ್ರತಿ ದಿನ ಕಾರ್ಯಾಚರಣೆ ಮಾಡಲಾಗುತ್ತಿದೆ.
ಶಕ್ತಿ ಯೋಜನೆ ಪೂರ್ವದಲ್ಲಿ ಪ್ರತಿದಿನ ಸರಾಸರಿ 5.40 ಲಕ್ಷ ಪುಯಾಣಿಕರು ಪುಯಾಣಿಸುತ್ತಿದ್ದರು, ಶಕ್ತಿ ಯೋಜನೆ ಪ್ರಾರಂಭದ ನಂತರ ಪ್ರತಿದಿನ ಸರಾಸರಿ ಒಟ್ಟು 7.94 ಲಕ್ಷ ಪುಯಾಣಿಕರು ಪ್ರಯಾಣಿಸುತ್ತಿದ್ದಾರೆ. ಅದರಿಂದ ಒಟ್ಟು 2.54 ಲಕ್ಷ ಪುಯಾಣಿಕರ ಸಂಖ್ಯೆಯಲ್ಲಿ ಪ್ರತಿದಿನ ಹೆಚ್ಚಳವಾಗಿರುತ್ತದೆ ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಯ ಸದಸ್ಯರುಗಳು ಗ್ಯಾರಂಟಿ ಯೋಜನೆಗಳ ಕುರಿತು ಪಂಚಾಯಿತಿಯಲ್ಲಿ ಹಾಗೂ ಇನ್ನೂ ಬೇರೆ ಸ್ಥಳಗಳಲ್ಲಿ ಜನ ಸ್ಪಂದನಾ ಸಭೆ ಆಯೋಜಿಸಿ ಅಲ್ಲಿನ ಫಲಾನುಭವಿಗಳು ಮತ್ತು ಅಧಿಕಾರಿಗಳನ್ನು ಒಂದುಕಡೆ ಎಲ್ಲರನ್ನು ಒಗ್ಗುಡಿಸಿ ಯೋಜನೆಗಳಿಂದ ಸದುಪಯೋಗಗಳ ಬಗ್ಗೆ ಚರ್ಚೆಸಿ ಸಮಸ್ಯೆಗಳಿದ್ದರೆ ತಕ್ಷಣದಲ್ಲೆ ಪರಿಹಾರಗಳನ್ನು ಕಂಡುಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಸಲಹೆ ನೀಡಿದರು.
ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು.