ಧಾರವಾಡ : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
ವಿನಯ್ ಕುಲಕರ್ಣಿ ಜಾಮೀನು ರದ್ದು ಕೋರಿ ಸಿಬಿಐ ಹಾಗೂ ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ಅರ್ಜಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ.
ಗಂಭೀರ ಆರೋಪ ಹೊತ್ತಿರುವ ಇಂತವರೂ ವಿಧಾನಸಭೆಗೆ ಹೋಗಬೇಕೆ? ಕೊಲೆಯಲ್ಲಿ ಭಾಗಿಯಾದವರು ವಿಧಾನಸಭೆಯಲ್ಲಿರಬೇಕಾ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೀಗಾದರೆ ಇವತ್ತು ಕೊಲೆಗಾರರು, ನಾಳೆ ದರೋಡೆಕೋರರು.
ದರೋಡೆ ಮಾಡಿದವರೂ ನಾಳೆ ವಿಧಾನಸಭೆಗೆ ಹೋಗಬಹುದು? ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಇಂತವರನ್ನು ಅನರ್ಹಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ತಮ್ಮ ಆಕ್ಷೇಪಣೆ ಪರಿಗಣಿಸುವಂತೆ ಈ ವೇಳೆ ವಿನಯ್ ಕುಲಕರ್ಣಿ ಪರ ವಕೀಲು ಮನವಿ ಮಾಡಿದ್ದಾರೆ. ವಿಚಾರಣೆ ಮುಂದೂಡಿಕೆಯಾಗಿದೆ.




