ಭ್ರಷ್ಟಾಚಾರ ಆರೋಪ ; ಮಾಜಿ ಬಿಜೆಪಿ ಶಾಸಕನ ಬಂಧನ
ಬೆಂಗಳೂರು : ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ ಅವ್ಯವಹಾರ ಆರೋಪದ ಮೇಲೆ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್ ವೀರಯ್ಯ ಜೈಲು ಸೇರಿದ್ದಾರೆ.
ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವೀರಯ್ಯ ಅವರನ್ನು ಹಾಜರುಪಡಿಸಿದ್ದರು. ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣದ ತನಿಖೆಗಾಗಿ ಸಿಐಡಿ ಕಳೆದ ಜುಲೈ 12 ರಂದು ಬಂಧಿಸಿತ್ತು. ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ವೀರಯ್ಯ ಅವರನ್ನು ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.
ಟರ್ಮಿನಲ್ ಗುತ್ತಿಗೆ ವ್ಯವಹಾರದ ಸಂದರ್ಭದಲ್ಲಿ ಅಂದಿನ ಅಧ್ಯಕ್ಷ ವೀರಯ್ಯ 3 ಕೋಟಿ ಕಿಕ್ ಬ್ಯಾಕ್ ಪಡೆದಿದ್ದರು. ನಂತರ ಇದೇ ಹಣದಲ್ಲಿ ನಿವೇಶನ ಖರೀದಿ ಮಾಡಿದ್ದರು. ಸಧ್ಯ ಪ್ರಕರಣದ ಬೆಳಕಿಗೆ ಬಂದಿದ್ದು ಸಿಐಡಿ ಅಧಿಕಾರಿಗಳು ಆರೋಪಿಯನ್ನು ಡ್ರಿಲ್ ಮಾಡುತ್ತಿದ್ದಾರೆ.