ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ವಿರುದ್ಧ ವರದಿಗಳಿಗೆ ನಿರ್ಬಂಧ ; ಕೋರ್ಟ್ ಆದೇಶ
ಬೆಂಗಳೂರು : ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವಿರೇಂದ್ರ ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ಬೆಂಗಳೂರು ಸಿಟಿ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯ ಎಂಬ ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. 2012 ರಲ್ಲಿ ನಡೆದಿದ್ದ ಈ ಪ್ರಕರಣದ ಕುರಿತು ಕೆಲವರು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸಲಾಗುತ್ತಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀನಪ್ಪ ಅವರು ಅವರು ಹೂಡಿದ್ದ ದಾವೆಯ ವಿಚಾರಣೆ ನಡೆಸಿದ್ದ ಕೋರ್ಟ. ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಪ್ರಕರಣ ದಾಖಲಿಸದಂತೆ ಆದೇಶ ಹೊರಡಿಸಿದೆ.
2012 ರಲ್ಲಿ ಕೊಲೆಯಾದ ಸೌಜನ್ಯ ಸಾವಿನ ಮರು ತನಿಖೆ ಆಗಬೇಕೆಂದು ರಾಜ್ಯಾದ್ಯಂತ ಕೂಗು ಜೋರಾಗತೊಡಗಿದೆ. ಪ್ರಕರಣ ಆರೋಪಿ ದೋಷಮುಕ್ತವಾಗಿದ್ದು ಕಳೆದ ತಿಂಗಳು ಸಿಬಿಐ ಕೋರ್ಟ್ ಆದೇಶ ಹೊರಡಿಸಿತ್ತು. ಸಧ್ಯ ಸೌಜ್ಯನ್ಯಳನ್ನು ಕೊಂದವರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದ್ದು ಇದಕ್ಕೆ ಸರ್ಕಾರ ಯಾವ ರೀತಿಯ ನಿರ್ಧಾರಕ್ಕೆ ಮುಂದಾಗುತ್ತದೆ ಎಂದು ಕಾದು ನೋಡಬೇಕು.


