ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ ಅವರ ಅಪರೂಪದ ಕ್ಷಣಗಳು
ನವದೆಹಲಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಪಡೆದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ಸಾಮಾನ್ಯವಾಗಿ ಅವರು ಇರುವಂತೆಯೇ ಬಿಳಿ ಬಣ್ಣದ ಪಂಚೆ, ಶರ್ಟ್, ಶಲ್ಯ ಧರಿಸಿ ಬಂದಿದ್ದು ವಿಶೇಷವಾಗಿತ್ತು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ನಮಸ್ಕರಿಸಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ, ಸಹಿ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಿದರು.
ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನಗೊಂಡಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಸಂತಸ ವ್ಯಕ್ತಪಡಿಸಿದ್ದರು.
ಧಾರ್ಮಿಕ, ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ ಡಾ.ವೀರೇಂದ್ರ ಹೆಗ್ಗಡೆ ಅವರ ಜ್ಞಾನ , ಅನುಭವ ರಾಜ್ಯಗಳಿಗೆ ವರದಾನವಾಗಲಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದರು.