Breaking : ರಾಜ್ಯಾದ್ಯಂತ ವೀಕೆಂಡ್ ಕಫ್ಯೂ೯ ಜಾರಿ
ಬೆಂಗಳೂರು : ಕೊರೊನಾ ಮೂರನೇ ಅಲೆ ಹೆಚ್ಚಾಗುತ್ತಿರುವ ಸಂಧರ್ಭದಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು ಬರುವ ಶುಕ್ರವಾರದಿಂದ ಸೋಮವಾರದವರೆಗೆ ವೀಕೆಂಡ್ ಕಫ್ಯೂ೯ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳವಾರ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ತಜ್ಞರ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದ್ದು ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನಲೆಯಲ್ಲಿ ವೀಕೆಂಡ್ ಕಫ್ಯೂ೯ ಮಾಡಿ ಆದೇಶ ಹೊರಡಿಸಿದೆ. ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್ ಅಶೋಕ್ ಕೊರೊನಾ ಹೋಗಲಾಡಿಸಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.