Select Page

Advertisement

ಮೊಬೈಲ್ ಖರೀದಿಸಲು ಹೆತ್ತ ಮಗುವನ್ನೇ ಮಾರಿದ ದಂಪತಿಗಳು

ಮೊಬೈಲ್ ಖರೀದಿಸಲು ಹೆತ್ತ ಮಗುವನ್ನೇ ಮಾರಿದ ದಂಪತಿಗಳು

ಪಶ್ಚಿಮ ಬಂಗಾಳ : ಊರೂರು ಸುತ್ತುತ್ತಿದ್ದ ದಂಪದಿಗಳು ಮೊಬೈಲ್ ಖರೀದಿಸಲು ಹಣ ಇಲ್ಲವಾದ ಸಂದರ್ಭದಲ್ಲಿ ಹೆತ್ತ ಮಗುವನ್ನು ಮಾರಿ ಮೊಬೈಲ್ ಫೋನ್ ಖರೀದಿ ಮಾಡಿರುವ ಆಶ್ಚರ್ಯಕರ ಘಟನೆ ಬೆಳಕಿಗೆ ಬಂದಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪೊಲೀಸರು ದಂಪತಿಗಳು ತಮ್ಮ ಎಂಟು ತಿಂಗಳು ಮಾರಾಟ ಮಾಡಿರುವ ಆರೋಪದ ಮೇಲೆ ಇಬ್ಬರನ್ನೂ ಬಂಧಿಸಿದ್ದಾರೆ.

ದಂಪತಿಗಳು ಹೊಸ ಮೊಬೈಲ್ ಖರೀದಿ ಮಾಡಲು ತೆರಳಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಬಂದ ಪೊಲೀಸರು ತನಿಖೆ ನಡೆಸಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಜಯದೇವ ಘೋಷ್ ಮತ್ತು ಆತನ ಸತಿ ಎಂದು ಗುರುತಿಸಲಾಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಈ ಪ್ರಕರಣ ನಡೆದಿದೆ ಎಂದು ಹೇಳಲಾಗುತ್ತುದೆ.

Advertisement

Leave a reply

Your email address will not be published. Required fields are marked *

error: Content is protected !!