ರಾಜಾಹುಲಿಗೆ ಗೌರವ ಡಾಕ್ಟರೇಟ್ ಪ್ರಧಾನ ; ಇನ್ಮುಂದೆ ಡಾ. ಬಿ.ಎಸ್ ಯಡಿಯೂರಪ್ಪ
ಶಿವಮೊಗ್ಗ : ಇಷ್ಟು ದಿನ ಮಾಜಿ ಮುಖ್ಯಮಂತ್ರಿ, ರಾಜಾಹುಲಿ ಎಂದು ಕರೆಸಿಕೊಳ್ಳುತ್ತಿದ್ದ ಬಿಎಸ್ವೈ ಇನ್ಮುಂದೆ ಡಾ. ಬಿ.ಎಸ್ ಯಡಿಯೂರಪ್ಪ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕೆಳದಿ ಶಿವಪ್ಪ ನಾಯಕ ಕೃಷಿ, ತೋಟಗಾರಿಕೆ ವಿವಿಯಿಂದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ.
ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಅವರು ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದರು.
ಈ ವೇಳೆ ವಿಶ್ವವಿದ್ಯಾಲಯದ 409 ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಗೆ ಅರಣ್ಯ ವಿಷಯದಲ್ಲಿ ಪದವಿ, 101 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 23 ವಿದ್ಯಾರ್ಥಿಗಳಿಗೆ ಪಿಹೆಚ್ಡಿ ಪದವಿ ಪ್ರಧಾನ ಮಾಡಲಾಯಿತು.