
ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ – ಏನಂದ್ರು ರಾಜಾಹುಲಿ

ಬೆಳಗಾವಿ : ಹಾಲಿ ಶಾಸಕರಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣ ಕೈಗೊಳುತ್ತದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಬುಧವಾರ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಾತಾವರಣ ಇದೆ ಎಂದು ಹೇಳಿದ್ದೆ ಆದರೆ ಇವೆಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧತಿಸುತ್ತಾರೆ ಎಂದು ಹೇಳುವ ಮೂಲಕ ಟಿಕೆಟ್ ಗೊಂದಲಕ್ಕೆ ಸ್ಪಷ್ಟೀಕರಣ ನೀಡಿದರು.
ಬಿಜೆಪಿ ಶಾಸಕರು ಹಾಗೂ ಕೆಲ ಸಚಿವರು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಇವರು. ನಮ್ಮ ಪಕ್ಷದಿಂದ ಯಾರೂ ಕಾಂಗ್ರೆಸ್ ಸೇರಲ್ಲ. ಸೋಲುವ ಪಕ್ಷಕ್ಕೆ ಯಾರೂ ಹೋಗುವುದಿಲ್ಲ ಎಂಬ ನಂಬಿಕೆ ನನಗಿದೆ. ಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುವುದಿಂದ ಯಾರೂ ಪಕ್ಷ ತೊರೆಯುವುದಿಲ್ಲ ಎಂದರು.
ಪ್ರಾಧಾನಿ ನರೇಂದ್ರ ಮೋದಿ ಬಿಜೆಪಿ ಸೋಲಿನಿ ಭೀತಿಯಿಂದ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿ. ಮೋದಿ ಆಗಮನದಿಂದ ರಾಜ್ಯದಲ್ಲಿ ಬಿಜೆಪಿ ಅಲೆ ಮತ್ತಷ್ಟು ಹೆಚ್ಚಾಗಿದೆ. ಇದರಿಂದ ಕಾಂಗ್ರೆಸ್ಸಿಗೆ ಸೋಲುವ ಭೀತಿ ಎದುರಾಗಿದೆ. ಈ ಭಯದಿಂದ ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.