ಯರಗಟ್ಟಿ : ಹೊಲದಲ್ಲಿ ನೀರು ಹರಿಸುವ ವಿಚಾರವಾಗಿ ಅಣ್ಣ–ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯಲ್ಲಪ್ಪ ದೇಮಪ್ಪ ಸಣ್ಣಮ್ಮನವರ (45) ಕೊಲೆಯಾಗಿರುವ ವ್ಯಕ್ತಿ. ಮಹಾದೇವಪ್ಪ ದೇವಪ್ಪ ಸಣ್ಣಮ್ಮನವರ (55) ಬಂಧಿತ ಆರೋಪಿಗಳು.
ಹೊಲಕ್ಕೆ ನೀರು ಬಿಡುವ ವಿಚಾರವಾಗಿ ಶನಿವಾರ ಮಧ್ಯಾಹ್ನ ಜಗಳ ನಡೆದಿದ್ದು, ಸಹೋದರರಾದ ನುಗ್ಗಾನಟ್ಟಿ ಗ್ರಾಮದಲ್ಲಿ ವಾಸವಿದ್ದ ಯಲ್ಲಪ್ಪ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ಯಲ್ಲಪ್ಪ ಸ್ಥಳದಲ್ಲಿ ಮೃತಪಟ್ಟಿದ್ದಾನೆ ಈ ಬಗ್ಗೆ ಅವರ ಪತ್ನಿ ಮುರಗೋಡ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ನೀರಿಗಾಗಿ ಸಹೋದರನ ಕೊಲೆಗೈದ ಅಣ್ಣ ; ಯರಗಟ್ಟಿಯಲ್ಲಿ ಹೀನ ಕೃತ್ಯ


